Happy Constitution Day of India, the largest democratic nation in the world., 26/11/2025

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು.


Sri Subramanya Shashti to all the people of the state Hearty wishes, 26/11/2025

ನಾಡಿನ ಸಮಸ್ತ ಜನತೆಗೆ ಶ್ರೀ ಸುಬ್ರಹ್ಮಣ್ಯ ಷಷ್ಠಿಯ
ಹಾರ್ದಿಕ ಶುಭಾಶಯಗಳು.
 

It is very sad to hear the news of the death of the road accident, senior IAS officer Mahantesh Beelagi, who is currently working as the managing director of the Karnataka State Minerals Corporation. While serving well in many districts of the state's adm, 26/11/2025

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಸುದ್ದಿ ತಿಳಿದು ಅತ್ಯಂತ ದುಃಖವನ್ನುಂಟುಮಾಡಿದೆ. ರಾಜ್ಯದ ಆಡಳಿತ ವ್ಯವಸ್ಥೆಯ ಹಲವು ಜಿಲ್ಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ, ಜನಮಾನಸದಲ್ಲಿ ಉತ್ತಮ ವ್ಯಕ್ತಿಯಾಗಿದ್ದ ಇವರ ಅಗಲಿಕೆಯು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ.
ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬದವರಿಗೆ ಹಾಗೂ ಅವರ ಬಂಧು-ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

High-tech silk nest market in Chikkaballapur district in Shidlaghatta, H.N. Chief Minister Shri Siddaramaiah and Deputy Chief Minister Shri D.K. Shivakumar inaugurated the project to fill water for 164 lakes in Valley 3rd phase., 25/11/2025

ಶಿಡ್ಲಘಟ್ಟದಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್. ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು.


Participated in the launch of Kaig Hockey Cup-2025 at Gonikoppalu and wished good luck, 24/11/2025

ಗೋಣಿಕೊಪ್ಪಲುವಿನಲ್ಲಿ ನಡೆದ ಕೈಗ್ ಹಾಕಿ ಕಪ್-2025 ರ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.